ಕಡಬ: ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ಜಮೀನು ಮಂಜೂರಾದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ವಿಧಾನಸೌಧದಲ್ಲಿ ಶಾಸಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ 152 ಫಲಾನುಭವಿಗಳಿಗೆ ಹಕ್ಕುಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕಡಬ ತಹಶೀಲ್ದಾರ್ ರಮೇಶ್ ಬಾಬು ಉಪತಹಶೀಲ್ದಾರ್ ಮನೋಹರ್, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು, ಪ್ರಮುಖರು ಉಪಸ್ಥಿತರಿದ್ದರು.
previous post