ಕಡಬ:ಕಡಬ ತಾಲೂಕು ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ಕಡಬ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ನಡೆಯಿತು.ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.ಮಾನ್ಸೂನ್ ಪೂರ್ವ ಮತ್ತು
ಮಾನ್ಸೂನ್ ವಿಪತ್ತು ನಿರ್ವಹಣೆಗೆ ಎಲ್ಲಾ ಸಿದ್ಧತೆ ನಡೆಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.ತಾಲೂಕು ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಅಗತ್ಯ ಪೂರ್ವ ಸಿದ್ಧತೆಗಳೊಂದಿಗೆ ಮಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಕ್ಷಿಪ್ರ ಕಾರ್ಯಚರಣೆ ಸಿದ್ಧತೆಗಳನ್ನು ಮಾಡಿಕೊಳ್ಳುವ ಅಗತ್ಯ ಇದೆ
ಎಂದು ಶಾಸಕರು ತಿಳಿಸಿದರು. ಇಲಾಖೆಗಳು ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಮಂಜಾಗ್ರತಾ ನಿರ್ವಹಣಾ ಕ್ರಮಗಳನ್ನು ಸೂಚಿಸಲಾಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.













