ಕಡಬ: ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಎನ್.ಭವಾನಿಶಂಕರ ಅಧಿಕಾರ ಸ್ವೀಕರಿಸಿದ್ದಾರೆ. ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಯಾಗಿದ್ದ ಭವಾನಿಶಂಕರ ಅವರನ್ನು ಕಡಬ ತಾ.ಪಂ. ಇಒ ಆಗಿ ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಇಂದು ಸಂಜೆ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಪುತ್ತೂರು ತಾ.ಪಂ.ಇಒ ನವೀನ್ ಕುಮಾರ್ ಭಂಡಾರಿ ಅವರು ಇತ್ತೀಚೆಗೆ ಅಸ್ತಿತ್ವಕ್ಕೆ ಬಂದ ಕಡಬ ತಾ.ಪಂ.ನ ಪ್ರಭಾರ ವಹಿಸಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post