ಕಡಬ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಡಬ ತಹಸೀಲ್ದಾರ್ ರಮೇಶ್ ಬಾಬು ರಜೆ ಘೋಷಿಸಿ ಆದೇಶ ನೀಡಿದ್ದಾರೆ.ಬಂಟ್ವಾಳ ತಾಲೂಕಿನ
ಹಯತುಲ್ ಶಾಲೆ ಗೂಡಿನ ಬಳಿ, ಕಿರಿಯ ಪ್ರಾಥಮಿಕ ಶಾಲೆ ವಳವೂರು, ಶಾರದ ಮತ್ತು ಎಸ್ ಎಲ್ ಎನ್ ಪಿ ಪಾಣೆಮಂಗಳೂರು ,ಎಲ್ ಸಿ ಆರ್ ಕಕ್ಕೆ ಪದವು, ಕೆಪಿಎಸ್ ಮೊಂಟೆಪದವು, ಕುನಿಲ್ ಶಾಲೆ ತುಂಬೆ. ಬಿ ಎ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆ ಪೆರ್ಲಬಿಯಪಾದೆ ಶಾಲೆ, ಸರಪಾಡಿ ಪ್ರೈಮರಿ ಶಾಲೆ, ಹೆಗಡೆ ಶಾಲೆ, ಪೂಪಾಡಿ ಕಟ್ಟಿ ಶಾಲೆ, ದಡ್ಡಲಕಾಡು, ಎರ್ಮಾಳ್ ಪದವು ಮಜ್ಲಿಸ್ ಶಾಲೆಗಳಿಗೆ ಬಂಟ್ವಾಳ ತಾಲೂಕು ಆಡಳಿತ ರಜೆ ಘೋಷಿಸಿದೆ.