ಕಡಬ: ಕಡಬ ಪಟ್ಟಣ ಪಂಚಾಯತ್ನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ನ ತಮನ್ನಾ ಜಮೀನ್ ಹಾಗೂ ಉಪಾಧ್ಯಕ್ಷರಾಗಿ ನೀಲಾವತಿ ಶಿವರಾಂ ಆಯ್ಕೆಯಾಗಿದ್ದಾರೆ.ಹೊಸದಾಗಿ ರಚನೆಯಾದ ಪಟ್ಟಣ ಪಂಚಾಯತ್ಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ
ಕಾಂಗ್ರೆಸ್ 8 ಸ್ಥಾನ ಹಾಗೂ ಬಿಜೆಪಿ 5 ಸ್ಥಾನ ಗೆದ್ದುಕೊಂಡಿತ್ತು. ಇಂದು ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ನ ಅಧ್ಯಕ್ಷ ಅಭ್ಯರ್ಥಿ ತಮನ್ನಾ ಜಮೀನ್ ಹಾಗೂ ಉಪಾಧ್ಯಕ್ಷ ಅಭ್ಯರ್ಥಿಯಾಗಿ ನೀಲಾವತಿ ಶಿವರಾಂ ಮತ್ತು ಬಿಜೆಪಿಯ ಅಧ್ಯಕ್ಷ ಅಭ್ಯರ್ಥಿಯಾಗಿ ಗುಣವತಿ ರಘುರಾಮ ಹಾಗೂ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಅಕ್ಷತಾ ಬಾಲಕೃಷ್ಣ ನಾಮಪತ್ರ ಸಲ್ಲಿಸಿದ್ದರು.ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ದ.ಕ ಸಂಸದ ಬೃಜೇಶ್ ಚೌಟರವರಿಗೆ ಮತದಾನದ ಹಕ್ಕು ಇರುವುದರಿಂದ ಅವರು ಮತದಾನದಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿಗಳಿಗೆ ತಲಾ 8 ಮತಗಳು ಮತ್ತು ಬಿಜೆಪಿ ಅಭ್ಯರ್ಥಿಗಳಿಗೆ ಸಂಸದರು ಶಾಸಕರ ಮತ ಸೇರಿ ತಲಾ 7 ಮತಗಳು ಲಭಿಸಿತು.












