ಕಡಬ: ಕಡಬ ಸಮೀಪದ ಐತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಗಾಯಗೊಂಡವರನ್ನು ಐತ್ತೂರು ಗ್ರಾಮದ ಗೆರ್ತಿಲ ನಿವಾಸಿ ಚೋಮ ಎಂದು ಗುರುತಿಸಲಾಗಿದೆ. ಇವರು ಶುಕ್ರವಾರ ಸಂಜೆ ಕೆಲಸ ಬಿಟ್ಟು ಮನೆಯ ಕಡೆ ತೆರಳುತ್ತಿದ್ದ ಸಂದರ್ಭದಲ್ಲಿ
ಗ್ರಾಮದ ನೆಲ್ಯಡ್ಕ ಎಂಬಲ್ಲಿ ಆನೆ ಹಠಾತ್ತಾಗಿ ದಾಳಿ ನಡೆಸಿದೆ. ಗಂಭೀರ ಗಾಯಗೊಂಡ ಇವರನ್ನು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಆನೆಗಳ ಹಿಂಡು ಸಮೀಪದ ಕಾಡಿನಲ್ಲಿ ಬೀಡು ಬಿಟ್ಟಿದೆ ಎಂದು ಸ್ಥಳೀಯರು ಹೇಳುತ್ತಾರೆ.
ಕಡಬ ತಾಲೂಜಿನ ವಿವಿಧ ಭಾಗಗಳಲ್ಲಿ ಕಾಡಾನೆ ಹಾವಳಿ ವ್ಯಾಪಕವಾಗಿದೆ. ಕೆಲವು ತಿಂಗಳ ಹಿಂದೆ ರೆಂಜಿಲಾಡಿ ಸಮೀಪ ಮೀನಾಡಿಯಲ್ಲಿ ಆನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದರು.









