ಸುಳ್ಯ: ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲುಗುಂಡಿ ಸಮೀಪ ಕಡೆಪಾಲದಲ್ಲಿ ಕಾರು ಮತ್ತು ಟ್ಯಾಂಕರ್ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮಡಿಕೇರಿ ಕಡೆಯಿಂದ ಸುಳ್ಯ ಭಾಗಕ್ಕೆ
ಬರುತ್ತಿದ್ದ ಟ್ಯಾಂಕರ್ ಮತ್ತು ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆ.ಅಪಘಾತಕ್ಕೀಡಾದ ಕಾರಿನವರು ಕೊಡಗು ಸಿದ್ಧಾಪುರದ ನೆಲ್ಲಿಹುದಿಕೇರಿಯವರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ನೆಲ್ಲಿಹುದಿಕೇರಿಯ ಶೋಭಾ (47)ಮೃತಪಟ್ಟವರು. ಕಾರಿನಲ್ಲಿದ್ದ ದೇವಯ್ಯ ಹಾಗೂ ವನಜಾಕ್ಷಿ ಗಾಯಗೊಂಡವರು.ಗಂಭೀರ ಗಾಯಗೊಂಡವರನ್ನು ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತಿದೆ.












