ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕಾ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಆರಂಭಗೊಂಡ ಮೂರು ದಿನಗಳ ಮಾವು ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಕದ್ರಿ ಪಾರ್ಕ್ ನಲ್ಲೀಗ ಮಾವಿನ ಹಣ್ಣುಗಳ ಸುವಾಸನೆ. ಹಲವು ತಳಿಯ ಮಾವುಗಳು
ಗಮನ ಸೆಳೆಯುತ್ತಿವೆ. ಬಾದಾಮಿ, ಅಲ್ಫಾನ್ಸೋ, ಬಂಗನಪಲ್ಲಿ, ಇಮಾಮ್ ಪಸಂದ್, ತೋತಾಪುರಿ, ರುಮಾನಿ, ಮುಂಡಪ್ಪ, ರಸಪೂರಿ, ಮಲ್ಗೋವಾ, ಹಾಮ್ಲೆಟ್, ಸಿಂಧೂರ, ಹನಿ ಡ್ಯೂ, ಕೇಸರ್, ಕಲಪಾಡಿ, ಕೊಂಕಣ್ ರುಚಿ, ಮಲ್ಲಿಕಾ ಹೀಗೆ ಹಲವಾರು ಜಾತಿಯ ಮಾವಿನ ಹಣ್ಣು ಗ್ರಾಹಕನ್ನು ಸೆಳೆಯುತ್ತಿವೆ.ರಾಜ್ಯದ ಬೇರೆ ಜಿಲ್ಲೆಗಳ ಬೆಳಗಾರರು ತಾವು ತೋಟಗಳಲ್ಲಿ

ಬೆಳೆದ ಮಾವಿನ ಹಣ್ಣುಗಳನ್ನು ಮಾರಾಟಕ್ಕೆ ತಂದಿದ್ದಾರೆ. ಒಟ್ಟು 37ಕ್ಕೂ ಹೆಚ್ಚು ಬಗೆಯ ಮಾವಿನ ಹಣ್ಣುಗಳು ಮಾರಾಟಕ್ಕಿವೆ. ವಿವಿಧ ತಳಿಯ ಹಲಸಿನ ಹಣ್ಣುಗಳೂ ಇವೆ.
ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್, ಪ್ರವೀಣ್ ಚಂದ್ರ ಆಳ್ವ, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಮತ್ತಿತರರು ಇದ್ದರು.







