ಪಂಜ:ಪಂಜದ ಶ್ರೀ ಶಾರದಾಂಬಾ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಮತ್ತು ಶಾರದಾ ಕಲಾಸಿರಿ ಪ್ರಶಸ್ತಿ ಪ್ರದಾನ ಶ್ರೀ ಶಾರದಾಂಬಾ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ನಡೆಯಿತು.ಯಕ್ಷಗಾನ ಕಲಾವಿದರಿಗೆ ಕಲಾಸಿರಿ ಪ್ರಶಸ್ತಿಯನ್ನು ವಿತರಿಸಿ ಮಾತನಾಡಿದ ಪಂಜ ಶ್ರೀ
ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ‘ವಿದ್ಯಾರ್ಥಿಗಳಿಗೆ ಯಕ್ಷಗಾನ ಶಿಕ್ಷಣ ನೀಡುವ ಮೂಲಕ ಉತ್ತಮ ಕಲಾವಿದರನ್ನು ಸೃಷ್ಠಿ ಮಾಡುವ ಶಾರದಾಂಬಾ ಯಕ್ಷಗಾನ ಅಧ್ಯಯನ ಕೇಂದ್ರದ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ವಕೀಲರಾದ ಪುರುಷೋತ್ತಮ ಮಲ್ಕಜೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಅಧ್ಯಕ್ಷ ಬಾಲಕೃಷ್ಣ ಪುತ್ಯ ಅಧ್ಯಕ್ಷತೆ ವಹಿಸಿದ್ದರು.ಶಾರದಾ ಕಲಾಸಿರಿ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಅರ್ಥದಾರಿ ಮತ್ತು ಕಲಾವಿದ ಕೆ.ಕೃಷ್ಣ ವೈಲಾಯ, ಹಿರಿಯ ಯಕ್ಷಗಾನ ಹಾಸ್ಯ ಪಾತ್ರದಾರಿ ಮೋಹನ ಆಚಾರ್ಯ ನಾಗತೀರ್ಥ ಅವರಿಗೆ ಪ್ರದಾನ ಮಾಡಲಾಯಿತು. ಉದಯೋನ್ಮುಖ ಕಲಾವಿದೆ
ದೃತಿ ಉಚ್ಚಲ ಶಾರದಾ ಬಾಲ ಕಲಾಸಿರಿ ಪ್ರಶಸ್ತಿ ನೀಡಲಾಯಿತು.

ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ನ ಉಪಾಧ್ಯಕ್ಷ ತಿಮ್ಮಪ್ಪ ಗೌಡ ಕೂತ್ಕುಂಜ, ಯಕ್ಷಗಾನ ನಾಟ್ಯ ಗುರು ಯಕ್ಷಮಣಿ ಗಿರೀಶ್ ಗಡಿಕಲ್ಲು
ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ಶಾರದಂಭ ಯಕ್ಷಗಾನ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಗೆ ನಿವೃತ್ತ ಪ್ರಾಂಶುಪಾಲೆ ಶೀಲಾವತಿ ಕೊಳಂಬೆ, ಪಂಜ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷ ಆನಂದ ಗೌಡ ಜಳದಹೊಳೆ, ಪೈಂದೋಡಿ ಶ್ರೀ ಸುಬ್ರಾಯ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಗೌಡ ಕುದ್ವ ಪ್ರಮಾಣ ಪತ್ರ ವಿತರಿಸಿದರ.ಶಿಕ್ಷಕ ಶಂಕರ್ ನೆಲ್ಯಾಡಿ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಮಹಾಲಿಂಗ ಸಂಪ ಪ್ರಾರ್ಥಿಸಿದರು. ಭಜನಾ
ಮಂಡಳಿ ಉಪಾಧ್ಯಕ್ಷ ಪರಮೇಶ್ವರ ಬಿಳಿಮಲೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಭಜನಾ ಮಂಡಳಿ ಕಾರ್ಯದರ್ಶಿ ಗುರುಪ್ರಸಾದ್ ತೋಟ ನಿರೂಪಿಸಿದರು.ಗಿರೀಶ್ ಗಡಿಕಲ್ಲು
ವಂದಿಸಿದರು.ಬಳಿಕ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಂದ ಯಕ್ಷಮಣಿ ಗಿರೀಶ್ ಗಡಿಕಲ್ಲು ನಿರ್ದೇಶನದ ಯಕ್ಷಗಾನ ಪ್ರದರ್ಶನ ‘ರಘುವಂಶ ದೀಪ’ ಪ್ರದರ್ಶನ ಗೊಂಡಿತು.















