ಮಡಿಕೇರಿ: ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಾಲಚಂದ್ರ ಕಳಗಿಯವರನ್ನು ವಾಹನ ಅಪಘಾತ ನಡೆಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಹರಿಪ್ರಸಾದ್ ಮತ್ತು ಜಯನ್ ಎಂಬವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೊಡಗು ಜಿಲ್ಲಾ
ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ.ಬಾಲಚಂದ್ರ ಕಳಗಿಯವರನ್ನು 2019 ಮಾ.19 ರಂದು ಓಮ್ನಿ ಕಾರಿಗೆ ಲಾರಿ ಡಿಕ್ಕಿ ಮಾಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸಂಪತ್, ಹರಿಪ್ರಸಾದ್ ಮತ್ತು ಜಯನ್ ಎಂಬವರನ್ನು ಮಡಿಕೇರಿ ಪೋಲೀಸರು ಬಂಧಿಸಿದ್ದರು. ಜಾಮೀನಿನಲ್ಲಿ ಹೊರಗೆ ಬಂದಿದ್ದ ಆರೋಪಿಗಳಲ್ಲಿ ಸಂಪತ್ ಎಂಬಾತನನ್ನು ಸುಳ್ಯದ ಶಾಂತಿನಗರದಲ್ಲಿ ಕೊಲೆ ಮಾಡಲಾಗಿತ್ತು.
ಇದೀಗ ವಿಚಾರಣೆ ಮುಗಿದು ಆರೋಪಿಗಳ ಮೇಲಿನ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಆರೋಪಿಗಳಾದ ಹರಿಪ್ರಸಾದ್ ಮತ್ತು ಜಯನ್ರವರಿಗೆ ಜೀವಾವಧಿ ಕಾರಾಗೃಹ ವಾಸ ಹಾಗೂ ದಂಡ ವಿಧಿಸಿ ಆದೇಶ ನೀಡಲಾಗಿದೆ.
ಆರೋಪ ಸಾಬೀತಾಗಿದೆ ಎಂದು ಅ.16 ರಂದು ಕೊಡಗು ನ್ಯಾಯಾಲಯ ಘೋಷಿಸಿ, ಶಿಕ್ಷೆಯ ತೀರ್ಪನ್ನು ಅ.19ಕ್ಕೆ ಕಾಯ್ದಿರಿಸಲಾಗಿತ್ತು.