ತಿರುವನಂತಪುರ: ಕೇರಳದ ಎರಣಾಕುಳಂ ಜಿಲ್ಲೆಯ ಕಳಮಶ್ಯೇರಿಯ ಸಮಾವೇಶ ಕೇಂದ್ರದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಲಾಗಿದೆ ಎಂದು ರಾಜ್ಯ ಡಿಜಿಪಿ ಶೇಕ್ ದರ್ವೇಶ್ ಸಾಹೇಬ್ ಹೇಳಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಐಇಡಿಯಿಂದ ಸ್ಫೋಟ ಸಂಭವಿಸಿದೆ ಎಂದು ಡಿಜಿಪಿ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.ಇಂದು ಬೆಳಿಗ್ಗೆ
9.40ರ ಸುಮಾರಿಗೆ ಕೊಚ್ಚಿಯ ಕಲಮಸ್ಸೆರಿಯ ಜಮ್ರಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. 36 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಡಿಜಿಪಿ ಹೇಳಿದರು.ತನಿಖೆಯ ನಂತರ ನಾನು ವಿವರಗಳನ್ನು ದೃಢೀಕರಿಸಬಲ್ಲೆ. ನಾವು ಎಲ್ಲಾ ಕೋನಗಳಿಂದ ಪರಿಶೀಲಿಸುತ್ತಿದ್ದೇವೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಶೀಘ್ರ ಪತ್ತೆ ಮಾಡುತ್ತೇವೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಕೇರಳದ ಎರ್ನಾಕುಲಂ ಬಳಿಯ ಕಲಮಸ್ಸೇರಿಯ ಕನ್ವೆನ್ಷನ್ ಸೆಂಟರ್ ಒಂದರಲ್ಲಿ ಸ್ಫೋಟವಾಗಿದ್ದು ಒಬ್ಬ ವ್ಯಕ್ತಿ ಮೃತಪಟ್ಟು 36 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಬೆಳಿಗ್ಗೆ ಸಂಭವಿಸಿತ್ತು.
ಸ್ಪೋಟ ಸಂಭವಿಸುವ ಸಂದರ್ಭ ಕೇಂದ್ರದಲ್ಲಿ 2000 ಕ್ಕೂ ಹೆಚ್ಚು ಜನ ಇದ್ದರು ಎಂದು ಹೇಳಲಾಗಿದೆ. ಘಟನೆಯ ಬಳಿಕ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ತನಿಖೆಯನ್ನು ಚುರುಕುಗೊಳಿಸಲಾಗಿದೆ