ಕಳಂಜ: ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಜನಸಾಮಾನ್ಯರಿಗೆ ತಿಳಿಯ ಪಡಿಸುವ ಉದ್ದೇಶದಿಂದ ಹಮ್ಮಿಕೊಂಡ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಸುಳ್ಯ ತಾಲೂಕು ಕಳಂಜ ಗ್ರಾಮ ಪಂಚಾಯತ್ ಅಯ್ಯನಕಟ್ಟೆ ದೀನ್ ದಯಾಳ್ ಸಮುದಾಯ
ಭವನದ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.ದ.ಕ. ಸಂಸದರಾದ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪಂಚಾಯತ್ ಅಧ್ಯಕ್ಷರು-ಉಪಾಧ್ಯಕ್ಷರು, ಸದಸ್ಯರು ಹಾಗೂ ಜನ ಪ್ರತಿನಿಧಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.









