ಸುಳ್ಯ:ಬೈಕ್ ಕಳ್ಳತನ ಪ್ರಕರಣಕ್ಜೆ ಸಂಬಂಧಪಟ್ಟು ಆರೋಪಿ ಕೊಡಗು ಸೋಮವಾರಪೇಟೆಯ ಬಸವನಹಳ್ಳಿಯ ಸುಬ್ರಮಣಿ (26) ಎಂಬಾತನನ್ನಿ ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಸೆ 16ರಂದು ದಾಖಲಾಗಿದ್ದ ಮೋಟರ್ ಸೈಕಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಸುಳ್ಯ ಠಾಣಾ ಪೊಲೀಸ್
ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡ ಕ್ಷೀಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ವರದಿಯಾದ ಕೆಲವೇ ಗಂಟೆಗಳಲ್ಲಿ ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಕುಂಜ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆ
ಇದಲ್ಲದೆ ಆರೋಪಿತನು ಇತ್ತೀಚೆಗೆ ಕೆಲ ದಿನಗಳ ಹಿಂದೆ ಸುಳ್ಯ ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರ ಪರ್ಸ್ ತೆಗೆದುಕೊಂಡು ಹೋಗಿದ್ದು ತನಿಖೆ ವೇಳೆ ತಿಳಿದುಬಂದಿರುತ್ತದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.