ಸುಳ್ಯ: ಟೆಂಪೋ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಚರ್ಪೆಯಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟೆಂಪೊಗೆ ಸುಳ್ಯ ಕಡೆಯಿಂದ ಬಂದ ಕಾರು ಟೆಂಪೋಗೆ ಗುದ್ದಿದೆ ಎಂದು ಹೇಳಲಾಗಿದೆ. ವಾಹನಗಳಿಗೆ ಹಾನಿ ಸಂಭವಿಸಿದ್ದು ಕಾರಿನಲ್ಲಿದ್ದವರು ಗಾಯಗೊಂಡಿದ್ದು ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆ ತರಲಾಗಿದೆ ಎಂದು ತಿಳಿದು ಬಂದಿದೆ.