ಸುಳ್ಯ:ಧರ್ಮ ಜಾಗೃತಿ ಮೂಡಿಸುವ ಮತ್ತು ಧರ್ಮವನ್ನು ಒಗ್ಗೂಡಿಸುವ ಕೆಲಸಗಳು ದೇವಸ್ಥಾನ ಹಾಗು ದೈವಸ್ಥಾನಗಳ ಮೂಲಕ ನಡೆಯುತ್ತಿದೆ.ದೇವ- ದೈವ ಸಾನಿಧ್ಯಗಳು ಧರ್ಮದ ಅಸ್ಮಿತೆಯ ಕೇಂದ್ರಗಳಾಗಿ ಇಂದು ಪುನರುಜ್ಜೀವನ ಗೊಳ್ಳುತ್ತಿದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಮಹಾ ಸ್ವಾಮೀಜಿಗಳು ಹೇಳಿದ್ದಾರೆ.
ಸುಳ್ಯದ ಕಾರಣಿಕ ಕ್ಷೇತ್ರ ಶ್ರೀ ಕಲ್ಕುಡ ದೈವಸ್ಥಾನದಲ್ಲಿ
ಪುನರ್ ಪ್ರತಿಷ್ಠಾ ಕಲಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.
ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ವೇ. ಮೂ.ದೇಲಂಪಾಡಿ ಗಣೇಶ ತಂತ್ರಿ ಗೌರವ ಉಪಸ್ಥಿತರಿದ್ದು ಮಾತನಾಡಿದರು.
ಶ್ರೀ ಕಲ್ಕುಡ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿದ್ದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ. ಕೆ. ವಿ. ಚಿದಾನಂದ,ಶ್ರೀ ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕೇಸರರಾದ ಡಾ. ಹರಪ್ರಸಾದ್ ತುದಿಯಡ್ಕ ಶುಭ ಹಾರೈಸಿದರು.ಕಲ್ಕುಡ ದೈವಸ್ಥಾನದ ಆಡಳಿತ ಧರ್ಮದರ್ಶಿ ಪಿ. ಕೆ. ಉಮೇಶ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಜೀರ್ಣೋದ್ಧಾರ ಸಮಿತಿಯ

ಕಾರ್ಯದರ್ಶಿ ದಿನೇಶ್ ಮಡಪ್ಪಾಡಿ ಸ್ವಾಗತಿಸಿದರು. ಆಡಳಿತ ಧರ್ಮದರ್ಶಿ ಪಿ. ಕೆ. ಉಮೇಶ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಧ್ಯಮ ಸಂಚಾಲಕ ಶಿವಪ್ರಸಾದ್ ಆಲೆಟ್ಟಿ ವಂದಿಸಿ,ಕಾರ್ಯಕ್ರಮ ನಿರೂಪಿಸಿದರು








