ಸುಳ್ಯ:ಸುಳ್ಯದ ಕಾರಣಿಕ ಕ್ಷೇತ್ರ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಕಲಶೋತ್ಸವ ಜೂ.18ರಂದು ನಡೆಯಿತು.ನವೀಕೃತ ಶಿಲಾಮಯ ಗುಡಿಯಲ್ಲಿ ಶ್ರೀ ಕಲ್ಕುಡ, ಕಲ್ಲುರ್ಟಿ ಹಾಗು ಗುಳಿಗ ದೈವದ ಕಟ್ಟೆಯಲ್ಲಿ ಪುನರ್ ಪ್ರತಿಷ್ಠಾ ಕಲಶೋತ್ಸವ ಭಕ್ತಿ ಸಂಭ್ರಮದಲ್ಲಿ ನಡೆಯಿತು. ತಂತ್ರಿಗಳಾದ
ಬ್ರಹ್ಮಶ್ರೀ ವೇ.ಮೂ ಗಣೇಶ ತಂತ್ರಿ ದೇಲಂಪಾಡಿಯ ಅವರ ನಿರ್ದೇಶನ ಮತ್ತು ಮಾರ್ಗದರ್ಶನದಲ್ಲಿ ಪೂ.ಗಣಪತಿ ಹೋಮ, ಬ್ರಹ್ಮಕಲಶ ಪೂಜೆ ನಡೆದು 8.08 ರಿಂದ 9.06ರ ಕರ್ಕಾಟಕ ಲಗ್ನದ ಶುಭ ಮುಹೂರ್ತದಲ್ಲಿ
ಶ್ರೀ ಕಲ್ಕುಡ, ಕಲ್ಲುರ್ಟಿ, ಗುಳಿಗ ದೈವಗಳಿಗೆ ಪುನರ್ ಪ್ರತಿಷ್ಠಾ ಕಲಶಾಭಿಷೇಕ ನಡೆಯಿತು. ಬಳಿಕ

ದೈವಗಳಿಗೆ ತಂಬಿಲ, ಮಹಾಪೂಜೆ ನಡೆಯಿತು.ದೈವಸ್ಥಾನದ ಆಡಳಿತ ಧರ್ಮದರ್ಶಿ ಪಿ.ಕೆ.ಉಮೇಶ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್, ಧರ್ಮದರ್ಶಿಗಳು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಬೆಳಗ್ಗಿನಿಂದ ನೂರಾರು ಭಕ್ತರು ಆಗಮಿಸಿದ್ದರು.








