ಸುಳ್ಯ:ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದು, ಸುಳ್ಯದಿಂದ ಮಂಗಳೂರಿಗೆ ತೆರಳುವ ಸಂದರ್ಭ ಸುಳ್ಯದ ಕಾರಣಿಕ ಕ್ಷೇತ್ರವಾದ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡರು ಸಂಕಲ್ಪ ಮಾಡಿ
ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಸಹ ಸಂಚಾಲಕ ಕೆ ಗೋಕುಲ್ ದಾಸ್, ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ, ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ ಜೆ, ಜಿಲ್ಲಾ ಕಾಂಗ್ರೆಸ್ ಸದಸ್ಯ ನಂದರಾಜ್ ಸಂಕೇಶ್, ಪ್ರಮುಖರಾದ ಕೃಷ್ಣಸ್ವಾಮಿ ಕಂದಡ್ಕ, ಗೋಪಾಲಕೃಷ್ಣ ಭಟ್, ಉಮೇಶ್ ಬೂಡು, ಪಕಿರೇಶ್ ಜಯನಗರ, ಅಣ್ಣದೊರೈ ಅಡ್ಯಡ್ಕ ಮೊದಲಾದವರು ಉಪಸ್ಥಿತರಿದ್ದರು.