ಮೇನಾಲ: ಅಜ್ಜಾವರ ಗ್ರಾಮದ ಕಲ್ಲಗುಡ್ಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸೇವಾ ಸಮಿತಿ ವತಿಯಿಂದ15ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಕಲ್ಲಗುಡ್ಡೆ ಮೈದಾನದಲ್ಲಿ ನಡೆಯಿತು. ಸುಳ್ಯ ಶ್ರೀಶಾರದಾಂಬಾ ಸೇವಾ ಸಮಿತಿಯ ಪದಾಧಿಕಾರಿ ರಾಜು ಪಂಡಿತ್ ಉದ್ಘಾಟಿಸಿದರು. ಶ್ರೀಕೃಷ್ಣ ಜನ್ಮಾಷ್ಟಮಿ ಸೇವಾ ಸಮಿತಿಯ
ಅಧ್ಯಕ್ಷ ಕೃಷ್ಣಪ್ಪ ಕಲ್ಲಗುಡ್ಡೆ ಅಧ್ಯಕ್ಷತೆ ವಹಿಸಿದ್ದರು.ಚಂದ್ರಶೇಖರ ಕೆ.ಪಲ್ಲತ್ತಡ್ಕ, ಮನೋಹರ. ಪಿ.ಬಿ. ಪಲ್ಲತ್ತಡ್ಕ ಅಡ್ಪಂಗಾಯ ಶಾಲಾ ಎಸ್ಡಿಎಂಸಿ ಉಪಾಧ್ಯಕ್ಷ ಶೌಕತ್ ಆಲಿ ಅತಿಥಿಗಳಾಗಿದ್ದರು. ಬಳಿಕ ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.
ಸಮಾರೋಪ ಸಮಾರಂಭದಲ್ಲಿ ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಸಾದ್ ರೈ ಮೇನಾಲ ಬಹುಮಾನ ವಿತರಿಸಿದರು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಬಲಡ್ಕ ದಿಕ್ಸೂಚಿ ಭಾಷಣ ಮಾಡಿದರು. ದ.ಕ.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ರಂಜಿತ್ ರೈ ಮೇನಾಲ, ಪ್ರಗತಿಪರ ಕೃಷಿಕರಾದ ಸುಜಿತಾ ರೈ ಮೇನಾಲ, ಅಜ್ಜಾವರ ಗ್ರಾಮ ಪಂಚಾಯತ್ ಸದಸ್ಯೆ ಗೀತಾ ಕಲ್ಲಗುಡ್ಡೆ ಉಪಸ್ಥಿತರಿದ್ದರು. ಶ್ರೀಧರ ಮಣಿಯಾಣಿ ಹಾಗೂ ಚಂದ್ರಶೇಖರ ಪಲ್ಲತಡ್ಕ ಕಾರ್ಯಕ್ರಮ ನಿರೂಪಿಸಿದರು.





