ಕಲ್ಲುಗುಂಡಿ: ಕಲ್ಲುಗುಂಡಿ ಸಮೀಪ ಕಡೆಪಾಲದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗು ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ನ.15ರಂದು ಸಂಭವಿಸಿದೆ. ಸ್ಥಳೀಯರು ಕಾರ್ಯಾಚರಣೆ ನಡೆಸಿ ಗಾಯಗೊಂಡ 6 ಮಂದಿಯನ್ನು ಚಿಕಿತ್ಸೆಗೆ

ಆಂಬುಲೆನ್ಸ್ ಮೂಲಕ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಕರೆತರಲಾಗುತಿದೆ ಎಂದು ತಿಳಿದು ಬಂದಿದೆ. ಮೈಸೂರು ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗು ಎದುರಿನಿಂದ ಬಂದ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಿಲುಕಿದ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಲಾರಿಯಲ್ಲಿ ಸಿಲುಕಿದ ಲಾರಿ ಚಾಲಕನನ್ನು ಸ್ಥಳೀಯರು ಹರಸಾಹಸ ಮಾಡಿ ಹೊರ ತೆಗೆದು ಆಸ್ಪತ್ರೆಗೆ ಕಳುಹಿಸಲಾಗಿದೆ. ಕೆಲವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ, ಕೆಲವರನ್ನು ಕೊಡಗು ಸಂಪಾಜೆ ಆಸ್ಪತ್ರೆ ಹಾಗು ಮತ್ತಿತತರ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ ಎಂದು ತಿಳಿದು ಬಂದಿದೆ. ಬಸ್‌ನಲ್ಲಿದ್ದ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತಿದೆ
