ಕಲ್ಮಡ್ಕ: ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಪಿ ಉದಯಕುಮಾರ್ ಬೆಟ್ಟ, ಉಪಾಧ್ಯಕ್ಷರಾಗಿ ರಾಮ ನಾಯ್ಕ ಉಡುವೆಕೋಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ
ಪಿ ಉದಯ ಕುಮಾರ್ ಬೆಟ್ಟ ಅವರ ನೇತೃತ್ವದ ಸಮನ್ವಯ ರಂಗ 10 ಸ್ಥಾನ ಮತ್ತು ಸಹಕಾರ ರಂಗದ 2 ಅಭ್ಯರ್ಥಿಗಳು ವಿಜೇತರಾಗಿದ್ದರು. ಜ.30 ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಒಂದೊಂದು ನಾಮಪತ್ರ ಮಾತ್ರ ಸಲ್ಲಿಕೆ ಆದ ಕಾರಣ ಅವಿರೋಧ ಆಯ್ಕೆಯಾಗಿದ್ದಾರೆ.