ಸುಳ್ಯ: ಕೇರಳ ರಾಜ್ಯದಲ್ಲಿ ಜಾನುವಾರುಗಳಲ್ಲಿ ಕಾಲುಬಾಯಿ ಜ್ವರದ ರೋಗೋದ್ರೇಕ ಕಂಡು ಬಂದ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ಗಡಿ ಭಾಗದ ಪ್ರದೇಶದಲ್ಲಿ ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಕಾಲುಬಾಯಿ ರೋಗ ನಿರೋಧಕ
ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸುಳ್ಯ ತಾಲೂಕಿನ ಎಲ್ಲಾ ಲಸಿಕೆ ತರಬೇತಿ ಹೊಂದಿರುವ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಆಲೆಟ್ಟಿ ಮತ್ತು ಮಂಡೆಕೋಲು ಗ್ರಾಮಗಳ ಗಡಿ ಭಾಗದ ಲಸಿಕಾ ಕಾರ್ಯಕ್ರಮಕ್ಕೆ ನಿಯೋಜಿಸಲಾಗಿದೆ. ಮುಂದಿನ ಒಂದು ವಾರಗಳ ಕಾಲ ಈ ಕಾರ್ಯಕ್ರಮ ನಡೆಯಲಿದ್ದು ಕೇರಳ ರಾಜ್ಯದಿಂದ ರೋಗವು ಸುಳ್ಯ ತಾಲೂಕಿಗೆ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಲಸಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸುಳ್ಯ ಪಶುಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ನಿತೀನ್ ಪ್ರಭು ತಿಳಿಸಿದ್ದಾರೆ.