ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ಏ.20ರಂದು ನಾಮಪತ್ರ ಸಲ್ಲಿಸಿದರು. ಮಿನಿ ವಿಧಾನಸೌಧದ ಚುನಾವಣಾ ಕಚೇರಿಯಲ್ಲಿನ ಚುನಾವಣಾಧಿಕಾರಿ
ಕಚೇರಿಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿ ಅರುಣ್ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿಗಳಾದ ಜಿ.ಮಂಜುನಾಥ್, ರಮೇಶ್ ಬಾಬು ಸಹಕರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಅಶೋಕ್ ಕೊಂಚಾಡಿ, ಜಯಪ್ರಕಾಶ್ ಕನ್ಯಾಡಿ,ಕರುಣಾಕರ ಪಳ್ಳತ್ತಡ್ಕ, ವಸಂತ ಛತ್ರಪ್ಪಾಡಿ, ತಾರನಾಥ ಕಡೀರಡ್ಕ, ದಿನೇಶ್ ಅಗತ್ತಾಡಿ, ಚಂದ್ರಹಾಸ ಪುರುಷಬೆಟ್ಟು ಮತ್ತಿತರರು ಉಪಸ್ಥಿತರಿದ್ದರು