ಸುಳ್ಯ:ರಾಷ್ಟ್ರೀಯ ಯುವ ಕಾಂಗ್ರೆಸ್ ಸಂಯೋಜಕ ಕಮಲ್ ಜಿತ್ ಸುಳ್ಯ ವಿಧಾನ ಸಭಾ ಕ್ಷೇತ್ರದ ಎಐಸಿಸಿ ಚುನಾವಣಾ ವೀಕ್ಷಕರಾಗಿ ನೇಮಕಗೊಂಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕನ್ಯಾಕುಮಾರಿ ಯಿಂದ ಕಾಶ್ಮೀರದವರೆಗೆ ನಡೆದ ಸಂದರ್ಭದಲ್ಲಿ

ಪೂರ್ಣ ಪ್ರಮಾಣ ದಲ್ಲಿ ಭಾಗವಹಿದ್ದ 209 ಜನರಲ್ಲಿ ಒಬ್ಬರಾದ ಕೇರಳದ ಕಣ್ಣೂರು ಮೂಲದ ಅಖಿಲ ಭಾರತ ಯುವ ಕಾಂಗ್ರೆಸ್ಸಿನ ಸಂಯೋಜಕ ಕಮಲ್ ಜಿತ್ ಪಕ್ಷದ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ವೀಕ್ಷಕರಾಗಿ ನೇಮಕ ಗೊಂಡಿರುತ್ತಾರೆ. ಇವರು ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ವಿಧಾನಸಭಾ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸುಳ್ಯಕ್ಕೆ ಆಗಮಿಸಿದ್ದಾರೆ. ಕ್ಷೇತ್ರದಾದ್ಯಂತ ಓಡಾಡಿ ಚುನಾವಣಾ ಪ್ರಚಾರಕ್ಕೆ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ. ಇಲ್ಲಿನ ಪಕ್ಷದ ಚುನಾವಣಾ ಪ್ರಚಾರದ ಉಸ್ತುವಾರಿ ವಹಿಸಿ ಎಐಸಿಸಿಗೆ ವರದಿ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.