ಸುಳ್ಯ: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಹಾಗೂ ನಾದಮಂಟಪ ಇದರ ಜಂಟಿ ಆಶ್ರಯದಲ್ಲಿ ಕನಕದಾಸ ಜಯಂತಿ ಆಚರಣೆ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು
ಉದ್ಘಾಟಿಸಿದರು. ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ವಿಶೇಷ ಉಪನ್ಯಾಸ ನೀಡಿದರು. ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿಯ ಅಧ್ಯಕ್ಷ, ತಹಶೀಲ್ದಾರ್ ಜಿ.ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್, ನಾದಮಂಟಪದ ಹರಿಹರ ಬಾಯಾಡಿ, ಸಿಎ ಗಣೇಶ್ ಭಟ್ ಪಿ, ನಗರ ಪಂಚಾಯತ್ ಸದಸ್ಯರಾದ ಎಂ.ವೆಂಕಪ್ಪ ಗೌಡ, ಶೀಲಾ ಅರುಣ ಕುರುಂಜಿ, ಕಿಶೋರಿ ಶೇಟ್, ಶಿಲ್ಪಾ ಸುದೇವ್, ಸುಶೀಲಾ ಜಿನ್ನಪ್ಪ ಮತ್ತಿತರರು ಉಪಸ್ಥಿತರಿದ್ದರು.












