ಸುಳ್ಯ: ಗ್ರಾಮ ಗ್ರಾಮಗಳಲ್ಲಿ ಇರುವ ಸರಕಾರಿ ಶಾಲೆಗಳಲ್ಲಿ ಎಲ್ಲಾ ಸೌಲಭ್ಯಗಳು ಅತ್ಯುತ್ತಮ ಶೈಕ್ಷಣಿಕ ವಾತಾವರಣ ಇದೆ. ಆದುದರಿಂದ ಸರಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆಯನ್ನು ಉಳಿಸಿ ಬೆಳೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ. ಅಭಿಪ್ರಾಯಪಟ್ಟಿದ್ದಾರೆ.
ಫೆ.8ರಂದು ನಡೆದ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಸರಕಾರಿ ಶಾಲೆಯಲ್ಲಿ

54 ಉಚಿತ ಸೌಲಭ್ಯಗಳನ್ನು ನೀಡಲಾಗುತಿದೆ. ಅತ್ಯುತ್ತಮ ಶೈಕ್ಷಣಿಕ ಅರ್ಹತೆಯನ್ನು ಪಡೆದವರೇ ಶಿಕ್ಷಕರಾಗಿದ್ದಾರೆ. ಕನ್ನಡದ ಜೊತೆಗೆ ಇಂಗ್ಲೀಷ್ ಭಾಷೆ ಸೇರಿ ಎಲ್ಲಾ ಭಾಷೆಗಳನ್ನು ಕಲಿಸಲಾಗುತ್ತದೆ ಎಂದು ಹೇಳಿದರು.
ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ಸರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಜಿ.ಪಂ.ಮಾಜಿ ಸದಸ್ಯ ಭರತ್ ಮುಂಡೋಡಿ,
ಉದ್ಯಮಿ ಉಮೇಶ್ ಮುಂಡೋಡಿ, ನಿವೃತ್ತ ಬಿಡಿಒ ಮೀನಾಕ್ಷಿ ಗೌಡ ಎಂ., ಗ್ರಾ.ಪಂ.ಸದಸ್ಯೆ ಸುಲೋಚನಾ ದೇವ ಭಾಗವಹಿಸಿದ್ದರು.

ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಬಾಲಕೃಷ್ಣ ಮಾಸ್ತರ್ ಹಿರಿಯಡ್ಕ, ಶತಮಾನೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಲಿಂಗಪ್ಪ ಗೌಡ ಚಿತ್ತಡ್ಕ,ಗೌರವಾಧ್ಯಕ್ಷ ಕುಶಾಲಪ್ಪ ಮಾಸ್ತರ್ ರುದ್ರಚಾಮುಂಡಿ ನಿಲಯ, ಕೋಶಾಧಿಕಾರಿ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ವಾಣಿ ಕೆ.ಎಸ್, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರಶೇಖರ ಕಂದ್ರಪ್ಪಾಡಿ, ಶತಮಾನೋತ್ಸವ ಸಮಿತಿ ಸಂಚಾಲಕ ವಿಜೇಶ್ ಹಿರಿಯಡ್ಕ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಕೇಶ್ ರಾಜ್ ಹಿರಿಯಡ್ಕ, ಪ್ರಧಾನ ಕಾರ್ಯದರ್ಶಿ ಪ್ರೀತಂ ಮುಂಡೋಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಶೇಖರ ವೇದಿಕೆಯಲ್ಲಿ ಉಪಸ್ಥಿತರಿದ್ದರು.ರಂಗಮಂದಿರ ಕೊಡುಗೆ ನೀಡಿದ ಉಮೇಶ್ ಮುಂಡೋಡಿ, ಹಾಗೂ ಶಾಲಾ ಕೊಠಡಿ ನಿರ್ಮಾಣ ಹಾಗೂ ಇತರ ನಿರ್ಮಾಣಕ್ಕೆ ಕೊಡುಗೆ ನೀಡಿದ ದಾನಿಗಳನ್ನು ಸನ್ಮಾನಿಸಲಾಯಿತು.

ಶತಮಾನೋತ್ಸವ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿದರು.ಶಾಲಾ ಮುಖ್ಯೋಪಾಧ್ಯಾಯರಾದ ವಾಣಿ ಕೆ.ಎಸ್ ವಂದಿಸಿದರು.
ಸೋಮಶೇಖರ ನೇರಳ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭಕ್ಕೆ ಮುನ್ನ ಆಕರ್ಷಕ ಮೆರವಣಿಗೆ ನಡೆಯಿತು.ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರಶೇಖರ ಕಂದ್ರಪ್ಪಾಡಿ ಮೆರವಣಿಗೆಗೆ ಚಾಲನೆ ನೀಡಿದರು.ನಿವೃತ್ತ ಮುಖ್ಯಗುರು ಬಾಲಕೃಷ್ಣ ಮಾಸ್ತರ್ ಹಿರಿಯಡ್ಕ ಧ್ವಜಾರೋಹಣ ನೆರವೇರಿಸಿದರು.

ವಿವಿಧ ಅಭಿವೃದ್ಧಿ ಕಾರ್ಯ ಉದ್ಘಾಟನೆ:
ನವೀಕೃತ ಶಾಲಾ ಕೊಠಡಿ, ನೂತನ ರಂಗಮಂದಿರ, ಕ್ರೀಡಾಂಗಣ, ಶಿಕ್ಷಕರ ವಸತಿಗೃಹ, ಇಂಟಾರ್ ಲಾಕ್ ಅಳವಡಿಕೆಯ ಉದ್ಘಾಟನೆಯನ್ನು ಅತಿಥಿಗಳು ನೆರವೇರಿಸಿದರು.ಶತಮಾನೋತ್ಸವ ಪ್ರಯುಕ್ತ ಶಾಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.
ಶಾಲೆಯ ಮೇಲ್ಚಾವಣಿ ನವೀಕರಿಸಲಾಗಿದೆ. ಎಲ್ಲಾ ತರಗತಿ ಕೊಠಡಿಗಳಿಗೆ ಟೈಲ್ಸ್ ಅಳವಡಿಸಲಾಗಿದೆ. ಶಿಕ್ಷಕರ ವಸತಿ ಗೃಹ ನಿರ್ಮಾಣ ಮಾಡಲಾಗಿದೆ. ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಅಭಿವೃದ್ಧಿ ಪಡಿಸಲಾಗಿದೆ. ಕ್ರೀಡಾಂಗಣ ಅಭಿವೃದ್ಧಿ ಮಾಡಿ 200 ಮೀಟರ್ ಟ್ರಾಕ್ನ ಕ್ರೀಡಾಂಗಣವಾಗಿ ಮಾಡಲಾಗಿದೆ.ಶಾಲೆಯ ಅಂಗಳ ಹಾಗೂ ರಸ್ತೆಯಲ್ಲಿ ಇಂಟರ್ಲಾಕ್ ಅಳವಡಿಸಲಾಗಿದೆ. ರಂಗ ಮಂದಿರ ನಿರ್ಮಾಣ ಮಾಡಲಾಗಿದೆ. ಕಂಪೌಂಡ್ ವಾಲ್ ನಿರ್ಮಿಸಲಾಗಿದೆ








