ಸುಳ್ಯ:ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಸಮಾರೋಪ ಸಮಾರಂಭ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ನಡೆಯಿತು.
ಮಾಜಿ ಸಚಿವ ಬಿ.ರಮಾನಾಥ ರೈ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.ಹಾವೇರಿ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ದಿಕ್ಸೂಚಿ ಭಾಷಣ ಮಾಡಿದರು.ಶಾಲೆಯಲ್ಲಿ
ಸೇವೆಗೈದ ಶಿಕ್ಷಕರನ್ನು ಸನ್ಮಾನಿಸಲಾಯಿತು.ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಸ್.ಅಂಗಾರ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕೆನಡಾದ ಉದ್ಯಮಿ ಉಮೇಶ್ ಮುಂಡೋಡಿ, ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್ ಪಡ್ಪು, ಭವಾನಿಶಂಕರ ಮುಂಡೋಡಿ, ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಶ್ರೀ ಪುರುಷ ದೈವ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಕಾಳಿಕಾಪ್ರಸಾದ್ ಮುಂಡೋಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಬಾಲಕೃಷ್ಣ ಮಾಸ್ತರ್ ಹಿರಿಯಡ್ಕ, ಶತಮಾನೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಲಿಂಗಪ್ಪ ಗೌಡ ಚಿತ್ತಡ್ಕ,ಗೌರವಾಧ್ಯಕ್ಷ ಕುಶಾಲಪ್ಪ ಮಾಸ್ತರ್ ರುದ್ರಚಾಮುಂಡಿ ನಿಲಯ, ಕೋಶಾಧಿಕಾರಿ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ವಾಣಿ ಕೆ.ಎಸ್, ಶತಮಾನೋತ್ಸವ ಸಮಿತಿ ಸಂಚಾಲಕ ವಿಜೇಶ್ ಹಿರಿಯಡ್ಕ,
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಕೇಶ್ ರಾಜ್ ಹಿರಿಯಡ್ಕ, ಪ್ರಧಾನ ಕಾರ್ಯದರ್ಶಿ ಪ್ರೀತಂ ಮುಂಡೋಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಶೇಖರ, ಎ.ಕೆ.ಹಿಮಕರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಾಂಸ್ಕೃತಿಕ ಸಂಭ್ರಮ
ಶತಮಾನೋತ್ಸವದ ಅಂಗವಾಗಿ ಸಾಂಸ್ಕೃತಿಕ ಸಂಭ್ರಮ ನಡೆಯಿತು. ಕರಣ್ ಮ್ಯೂಸಿಕಲ್ಸ್ ಅವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು. ಅಂಗನವಾಡಿ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿಗಳು, ಹಳೆ ವಿದ್ಯಾರ್ಥಿ, ಯುವಕ ಯುವತಿ ಮಂಡಲದವರಿಂದ ಸಾಂಸ್ಕೃತಿಕ ವೈಭವ ನಡೆಯಿತು. ರಾತ್ರಿ ಡಾ.ದೇವದಾಸ್ ಕಾಪಿಕಾಡ್ ಅವರ ಚಾ ಪರ್ಕ ಕಲಾವಿದರು ಅಭಿನಯಿಸುವ ತುಳು ಹಾಸ್ಯಮಯ ನಾಟಕ ಪುದರ್ ದೀದಾಂಡ್ ಪ್ರದರ್ಶನಗೊಂಡಿತು.









