ಕಂದ್ರಪ್ಪಾಡಿ:ಕಂದ್ರಪ್ಪಾಡಿ ಶ್ರೀ ರಾಜ್ಯ ದೈವ ಮತ್ತು ಪುರುಷ ದೈವಗಳ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಭಾಗವಹಿಸಿ
ಮಾತನಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ,ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಮಾಜಿ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಕಾಳಿಕಾ ಪ್ರಸಾದ್,ದೇವಚಳ್ಳ ಗ್ರಾ.ಪಂ.ಅಧ್ಯಕ್ಷೆ ಸುಲೋಚನ ದೇವ, ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು ಸೇರಿದಂತೆ ಪ್ರಮುಖ ಮುಖಂಡರು ಭಕ್ತಾಧಿಗಳು ಉಪಸ್ಥಿತರಿದ್ದರು.