ಸುಳ್ಯ: ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಭಾನುವಾರ ಬೆಳಿಗ್ಗೆ ಉಗ್ರಾಣ ತುಂಬಿಸುವ ಕಾರ್ಯಕ್ರಮ ನಡೆಯಿತು. ಸಂಜೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ನೇತೃತ್ವದಲ್ಲಿ
ಪುಣ್ಯಾಹವಾಚನ, ಸ್ಥಳ ಶುದ್ಧಿ, ಪ್ರಾಸಾದ ಶುದ್ಧಿ ನಡೆದ ಬಳಿಕ ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ವಾಸ್ತು ಪುಣ್ಯಾಹಾಂತ ಮೊದಲಾದ ವೈದಿಕ, ತಾಂತ್ರಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನಂತರ ನಡೆದ ಅನ್ನಸಂತರ್ಪಣಾ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಪಾಲ್ಗೊಂಡು ಅನ್ನ ಪ್ರಸಾದ ಸ್ವೀಕರಿಸಿದರು.
ಕಣೆಮರಡ್ಕ ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪೂರ್ಣಚಂದ್ರ ಕಣೆಮರಡ್ಕ, ಮಂಡೆಕೋಲು ಮಹಾವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಬ್ರಹ್ಮಕಲಶೋತ್ಸವ ಸಮಿತಿ ಆದ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ, ಪ್ರಧಾನ ಕಾರ್ಯದರ್ಶಿ ಸುರೇಶ್ ಕಣೆಮರಡ್ಕ, ಹಿರಿಯರಾದ ಬಟ್ಯಪ್ಪ ಮಣಿಯಾಣಿ ಸೇರಿದಂತೆ ಬ್ರಹ್ಮಕಲಶೋತ್ಸವ ಉಪ ಸಮಿತಿಗಳ ಸಂಚಾಲಕರು ಹಾಗೂ ಇನ್ನಿತರ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.