ಸುಳ್ಯ:ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಂಗಳವಾರ ವಿಷ್ಣುಮೂರ್ತಿ ದೈವದ ನಡಾವಳಿ ಕಾರ್ಯಕ್ರಮ ನಡೆಯಿತು.ನವೀಕರಣಗೊಂಡ ದೈವಸ್ಥಾನದಲ್ಲಿ ಸೋಮವಾರ ಪ್ರತಿಷ್ಠಾ ಕಾರ್ಯಕ್ರಮ ನಡೆದ ಬಳಿಕ
ದೈವದ ಭಂಡಾರ ತೆಗೆಯುವ ಕಾರ್ಯಕ್ರಮ ನಡೆಯಿತು. ಮಂಗಳವಾರ ಬೆಳಗ್ಗೆ ವಿಷ್ಣುಮೂರ್ತಿ ದೈವದ ನಡಾವಳಿ ಕಾರ್ಯಕ್ರಮ ನಡೆದಾಗ ಸಾವಿರಾರು ಭಕ್ತಾದಿಗಳು ಕಣ್ತುಂಬಿಕೊಂಡರು. ಮಧ್ಯಾಹ್ನ ಅನ್ನಸಂತರ್ಪಣೆಯ ನಂತರ ಮುಳ್ಳುಗುಳಿಗನ ಕೋಲ ನಡೆಯಿತು.ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಕಣೆಮರಡ್ಕ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ಊರ ಭಕ್ರ ವೃಂದ ಈ ಸಂದರ್ಭದಲ್ಲಿ ಹಾಜರಿದ್ದು ದೈವದ ಪ್ರಸಾದ ಸ್ವೀಕರಿಸಿದರು.