ಸುಳ್ಯ:ಲೋಕಸಭಾ ಚುನಾವಣೆಗೆ ಬಿಜೆಪಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಹಂತದ ಪ್ರಚಾರ ಕಾರ್ಯ ಪೂರ್ಣಗೊಂಡಿದೆ. ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ನಿಶ್ಚಿತ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 10 ಮಹಾ ಶಕ್ತಿ ಕೇಂದ್ರ, 68 ಶಕ್ತಿ ಕೇಂದ್ರಗಳಲ್ಲಿ ಎರಡು ಸುತ್ತಿನ
ಸಭೆಗಳು ನಡೆದಿದೆ. 233 ಬೂತ್ಗಳಲ್ಲಿ ಎರಡು ಸುತ್ತಿನ ಮನೆ ಮನೆ ಭೇಟಿ ಪ್ರಚಾರ ನಡೆಸಲಾಗಿದೆ. 21ರಂದು ಕ್ಷೇತ್ರದ ಎಲ್ಲಾ ಮನೆಗಳನ್ನೂ ಒಂದೇ ದಿನ ಸಂಪರ್ಕಿಸುವ ಮಹಾ ಸಂಪರ್ಕ ಅಭಿಯಾನ ನಡೆಯಲಿದೆ. ಪ್ರತಿ ನಾಯಕರು ಅವರವರ ಬೂತ್ನಲ್ಲಿ ಪ್ರಚಾರ ನಡೆಸಲಿದ್ದಾರೆ.10 ಸಾವಿರ ಮಂದಿ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸುಳ್ಯ ಕ್ಷೇತ್ರದಲ್ಲಿ 60 ಸಾವಿರ ಮತಗಳ ಅಂತರ ಪಡೆಯಲಿದ್ದಾರೆ ಎಂದು ಕಂಜಿಪಿಲಿ ತಿಳಿಸಿದರು.
ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ ಕುರಿತು ಪ್ರತಿಕ್ರಿಯೆ ನೀಡಿದ ಹರೀಶ್ ಕಂಜಿಪಿಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಜೊತೆ ಇದ್ದಾರೆ. ಕೆಲವು ಅಲ್ಪ ಸಂಖ್ಯಾತ ಮುಖಂಡರು ಮಾತ್ರ ಕಾಂಗ್ರೆಸ್ ಸೇರ್ಪಡೆ ಆಗಿದೆ ಎಂದು ಹೇಳಿದರು.

ನೋಟಾದಿಂದ ಯಾರಿಗೂ ನ್ಯಾಯ ಸಿಗಲು ಸಾಧ್ಯವಿಲ್ಲ:ರಾಕೇಶ್ ಕೆಡೆಂಜಿ
ಬಿಜೆಪಿಯ ಮತಗಳನ್ನು ಹಾಳು ಮಾಡಲು ಕೆಲವು ನೋಟಾ ಮತಕ್ಕೆ ಅಭಿಯಾನ ನಡೆಸುವುದು ಗಮನಕ್ಕೆ ಬಂದಿದೆ. ಕೆಲವರು ದ್ವೇಷ ಸಾಧನೆಗಾಗಿ ನೋಟಾ ಅಭಿಯಾನ ನಡೆಸುತ್ತಿದ್ದಾರೆ. ನೋಟಾದಿಂದ ಯಾರಿಗೂ ಯಾವ ನ್ಯಾಯ ಸಿಗಲು ಸಾಧ್ಯವಿಲ್ಲ, ಯಾವುದೇ ಸಮಸ್ಯೆಗೆ ಪರಿಹಾರ ಕಾಣಲು ಸಾಧ್ಯವಿಲ್ಲ. ಆದುದರಿಂದ ಮತದಾರರು ತಮ್ಮ ಮತಗಳನ್ನು ಹಾಳು ಮಾಡಬಾರದು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಡಿಸಿಸಿ ನಿರ್ದೇಶಕ ಎಸ್.ಎನ್.ಮನ್ಮಥ, ಮಂಡಲ ಸಮಿತಿ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಕೋಶಾಧಿಕಾರಿ ಸುಬೋದ್ ಶೆಟ್ಟಿ ಮೇನಾಲ, ಚುನಾವಣಾ ನಿರ್ವಹಣಾ ಸಮಿತಿಯ ಸಹ ಸಂಚಾಲಕ ದಿನೇಶ್ ಮೆದು ಉಪಸ್ಥಿತರಿದ್ದರು.