ಬೆಂಗಳೂರು:ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅವರು ಪ್ರಾಧಿಕಾರದ ಮುಖ್ಯ ಕಚೇರಿಯಲ್ಲಿ ಜೂ.13ರಂದು ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರ್ಕಾರವು ಮಾರ್ಚ್ 16 ರಂದು ಡಾ. ಪುರುಷೋತ್ತಮ ಬಿಳಿಮಲೆ ಅವರನ್ನು
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಸರ್ಕಾರಿ ಆದೇಶ ಪ್ರಕಟಗೊಂಡ ದಿನದಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ಅವರು ಇಷ್ಟು ದಿನ ಅಧಿಕಾರ ಸ್ವೀಕಾರ ಮಾಡಿರಲಿಲ್ಲ.
“ಎಲ್ಲಾ ವಲಯಗಳಲ್ಲೂ ಕನ್ನಡ ಬಳಕೆ ಮತ್ತು ಅನುಷ್ಠಾನಕ್ಕಾಗಿ ಹಾಗೂ ಕನ್ನಡದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಲು ಪ್ರಾಧಿಕಾರ ನಿರಂತರವಾಗಿ ಶ್ರಮಿಸಲಿದೆ” ಎಂದು ಅಧಿಕಾರ ಸ್ವೀಕರಿಸಿದ ಬಳಿಕ ಪುರುಷೋತ್ತಮ ಬಿಳಿಮಲೆ ಅವರು ಹೇಳಿದ್ದಾರೆ.