ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಸ್ವಾಗತ ಸಮಿತಿ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನ ನ.23ರಂದು ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ವಿದ್ಯಾಲಯದ ಡಾ.ಕುರುಂಜಿ ವೆಂಕಟ್ರಮಣ ಗೌಡ ವೇದಿಕೆ ನಿರಂಜನ ಸಭಂಗಣದಲ್ಲಿ ನಡೆಯಲಿದೆ.ತಳಿರು ತೋರಣಗಳಿಂದ ಶೃಂಗಾರಗೊಂಡಿರುವ ಅರಂತೋಡು ಕನ್ನಡ ತೇರು ಎಳೆಯಲು, ಕನ್ನಡ ನಾಡು ನುಡಿಯ ಸಂಭ್ರಮಕ್ಕೆ ಅಣಿಯಾಗಿದೆ.ಪೂರ್ವಾಹ್ನ 9 ಗಂಟೆಗೆ
ಅರಂತೋಡು ಗ್ರಾಮ ಪಂಚಾಯತ್ ಕಚೇರಿ ಬಳಿಯಿಂದ ಕನ್ನಡ ಭುವನೇಶ್ವರಿಯ ಮೆರವಣಿಗೆ ನಡೆಯಲಿದೆ. ನಿವೃತ್ತ ಮುಖ್ಯ ಶಿಕ್ಷಕರಾದ ಹೊನ್ನಪ್ಪ ಮಾಸ್ತರ್ ಅಡ್ತಲೆ ಮೆರವಣಿಗೆಗೆ ಚಾಲನೆಯನ್ನು ನೀಡಲಿದ್ದಾರೆ. 9:30ಕ್ಕೆ ರಾಷ್ಟ್ರ ಧ್ವಜಾರೋಹಣವನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಹಾಗೂ ಪರಿಷತ್ತಿನ ಧ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥ್ ನೆರವೇರಿಸಲಿದ್ದಾರೆ.9:45 ಕ್ಕೆ ಪುಸ್ತಕ ಪ್ರದರ್ಶನದ ಉದ್ಘಾಟನೆಯನ್ನು ತಹಸಿಲ್ದಾರ್ ಮಂಜುಳಾ ನೆರವೇರಿಸಲಿದ್ದಾರೆ.
ಪೂ.10 ರಿಂದ ಹಿರಿಯ ಸಾಹಿತಿ ಲೀಲಾ ದಾಮೋದರ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಮ್ಮೇಳನದ ಉದ್ಘಾಟನೆಯನ್ನು ಸಾಹಿತಿಗಳಾದ ನರೇಂದ್ರ ರೈ ದೇರ್ಲ ನೆರವೇರಿಸಲಿದ್ದಾರೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರತಥಿ ಮುರುಳ್ಯ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಹೊಸ ಕೃತಿಗಳ ಬಿಡುಗಡೆ ಗೊಳಿಸಲಿದ್ದಾರೆ. ಸಮ್ಮೇಳನದ ನಿಕಟ ಪೂರ್ವ ಅಧ್ಯಕ್ಷ ಕೆ.ಆರ್ ಗಂಗಾಧರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ ಪಿ ಶ್ರೀನಾಥ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲ್ ಉಪಸ್ಥಿತರಿರುತ್ತಾರೆ.ಮಧ್ಯಾಹ್ನ 12 ರಿಂದ ಕವಿಗೋಷ್ಠಿ ನಡೆಯಲಿದೆ.ಮಧ್ಯಾಹ್ನ 1:30 ರಿಂದ 2 ಗಂಟೆಯ ತನಕ ಸಾಂಸ್ಕೃತಿಕ ಕಾರ್ಯಕ್ರಮ, ಮದ್ಯಾಹ್ನ 2 ರಿಂದ 3 ಗಂಟೆಯವರೆಗೆ ನಿರಂಜನ ಶತಮಾನೋತ್ಸವ ಸ್ಮರಣೆ ವಿಚಾರಗೋಷ್ಠಿ ನಡೆಯಲಿದೆ.
ಮಧ್ಯಾಹ್ನ 3 ರಿಂದ 4ರವರೆಗೆ ಕನ್ನಡ ಭಾಷೆ ಅನ್ನದ ಭಾಷೆ ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳ ಚರ್ಚೆ ಗೋಷ್ಠಿ ನಡೆಯಲಿದೆ. ಬಳಿಕ ಗಾಯಕರಾದ ಕೆ.ಆರ್. ಗೋಪಾಲ ಕೃಷ್ಣ ಹಾಗೂ ಪೂರ್ಣಿಮಾ ಇವರಿಂದ ಗೀತ ಗಾಯನ ನಡಿಲಿದೆ. ಸಂಜೆ 4ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ ಪಿ ಶ್ರೀನಾಥ್ ಇವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ಹಾಗೂ ಕನ್ನಡ ಕಸ್ತೂರಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ.ಸಮಾರೋಪ ಭಾಷಣವನ್ನು ಉಳ್ಳಾಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಧನಂಜಯ ಕುಂಬ್ಲೆ ನೆರವೇರಿಸಲಿದ್ದಾರೆ. ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಸಾಧಕನನ್ನು ಸನ್ಮಾನಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಜ್ಜನ ಪ್ರತಿಷ್ಠಾನ ಬೀಜದ ಕಟ್ಟೆ ಇದರ ಡಾ. ಉಮ್ಮರ್ ಬೀಜದಕಟ್ಟೆ ಭಾಗವಹಿಸಲಿದ್ದಾರೆ.
ಸಂಜೆ 5:30 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.