ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಸ್ವಾಗತ ಸಮಿತಿ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ವಿದ್ಯಾಲಯದ ಡಾ.ಕುರುಂಜಿ ವೆಂಕಟ್ರಮಣ ಗೌಡ ವೇದಿಕೆ ನಿರಂಜನ ಸಭಾಂಗಣದಲ್ಲಿ ಅರಂಭಗೊಂಡಿದೆ. ಅರಂತೋಡು ಗ್ರಾಮ ಪಂಚಾಯತ್ ಕಚೇರಿ ಬಳಿಯಿಂದ
ಕನ್ನಡ ಭುವನೇಶ್ವರಿಯ ಮೆರವಣಿಗೆ ನಡೆಯಿತು. ನಿವೃತ್ತ ಮುಖ್ಯ ಶಿಕ್ಷಕರಾದ ಹೊನ್ನಪ್ಪ ಮಾಸ್ತರ್ ಅಡ್ತಲೆ ಮೆರವಣಿಗೆಗೆ ಚಾಲನೆ ನೀಡಿದರು.
ಕೊಂಬು, ಕಹಳೆ, ವಾದ್ಯ ಮೇಳಗಳೊಂದಿಗೆ ಅದ್ದೂರಿ ಕನ್ನಡ ಭುವನೇಶ್ವರಿಯ ಮೆರವಣಿಗೆ ನಡೆಯಿತು.
ರಾಷ್ಟ್ರ ಧ್ವಜಾರೋಹಣವನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಹಾಗೂ ಪರಿಷತ್ತಿನ ಧ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥ್ ನೆರವೇರಿಸಿದರು. ಪುಸ್ತಕ ಪ್ರದರ್ಶನದ ಉದ್ಘಾಟನೆಯನ್ನು ತಹಸಿಲ್ದಾರ್ ಮಂಜುಳಾ ನೆರವೇರಿಸಿದರು. ಸಮ್ಮೇಳನಾಧ್ಯಕ್ಷೆ ಹಿರಿಯ ಸಾಹಿತಿ ಲೀಲಾ ದಾಮೋದರ, ಕಸಾಪ ಸುಳ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ಉಪಸ್ಥಿತರಿದ್ದರು.