ಪೆರಾಜೆ: ಕನ್ನಡ ಪೆರಾಜೆ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಎಲ್ಕೆಜಿ ತರಗತಿ ಕೊಠಡಿಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ .ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು ಶಾಲೆಯ
ಅಭಿವೃದ್ಧಿ ಕಾರ್ಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ವಿನುತಾ, ಸ್ಥಳೀಯರಾದ ಸುರೇಶ್ ಪೆರುಮುಂಡ,ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷ ಜಯರಾಮ ಪೆರುಮುಂಡ, ಬಿ ಓ ಮಹೇಶ್, ಅಬೂಬಕ್ಕರ್ ಪಿಎನ್, ಮುಖ್ಯ ಶಿಕ್ಷಕಿ ಜಯಲಕ್ಷ್ಮಿ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಎಸ್ ಡಿ ಎಂ ಸಿ ಸದಸ್ಯರುಗಳು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಶಾಸಕ ಪೊನ್ನಣ್ಣ ರವರನ್ನು ಶಾಲಾ ಎಸ್ಡಿಎಂಸಿ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು












