ಕಾಂತಮಂಗಲ:ತಲೆಗೆ ಕಲ್ಲು ಹಾಕಿ ಕೊಲೆ ಮಾಡಿದ ರೀತಿಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಅಜ್ಜಾವರ ಗ್ರಾಮದ ಕಾಂತಮಂಗಲದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ಎಲ್ಲಾ
ಆಯಾಮಗಳಲ್ಲಿ ತನಿಖೆ ನಡೆಯುತಿದೆ ಎಂದು ಅವರು ತಿಳಿಸಿದ್ದಾರೆ.ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರು ಆಗಮಿಸಿ ಪರೀಕ್ಷೆ ನಡೆಸಿದ್ದಾರೆ. ಕಾಂತಮಂಗಲ ಶಾಲಾ ಜಗುಲಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸುಮಾರು 30 ವರ್ಷದ ಅಪರಿಚಿತ ಯುವಕನ ಶವ ಪತ್ತೆಯಾಗಿದೆ. ಪೋಲೀಸರು ಸ್ಥಳಕ್ಕೆ ಬಂದಿದ್ದು ಮಹಜರು ನಡೆಸುತಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಡಿ.ಎಸ್, ಪುತ್ತೂರು ಡಿವೈಎಸ್ಪಿ ಅರುಣ್ ನಾಗೇ ಗೌಡ, ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ ಕೆ, ಸುಳ್ಯದ ಪ್ರಭಾರ ಎಸ್ಐ ಮಹೇಶ್ ಪೂಜಾರ್ ಮತ್ತಿತರರು ಭೇಟಿ ನೀಡಿದ್ದಾರೆ.