ಸುಳ್ಯ:ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೀಡಾದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತಪಟ್ಟವರು ಕೊಡಗು ವಿರಾಜಪೇಟೆ ಮೂಲದ ವಸಂತ ಎಂದು ಗುರುತಿಸಲಾಗಿದೆ ಎಂದು
ತಿಳಿದು ಬಂದಿದೆ.ಇಂದು ಬೆಳಿಗ್ಗೆ ಕಾಂತಮಂಗಲ ಶಾಲಾ ಬಳಿಯಲ್ಲಿ ತಲೆಗೆ ಕಲ್ಲು ಹೊತ್ತು ಹಾಕಿ ಕೊಲೆಯಾದ ರೀತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿತ್ತು. ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ತನಿಖೆ ಆರಂಭಿಸಿದರು. ಪೊಲೀಸರು ನಡೆಸಿದ ತನಿಖೆಯಿಂದ ಮೃತಪಟ್ಟ ವ್ಯಕ್ತಿ ವಸಂತ ಎಂದು ಗುರುತಿಸಲಾಗಿದ್ದು ಈತ ಕುದ್ರೆಪಾಯದಿಂದ ಮದುವೆಯಾಗಿದ್ದ ಎಂದು ಹೇಳಲಾಗುತಿದೆ. ಕಾಣಿಯೂರಿನಲ್ಲಿ ತೋಟದ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.ಘಟನೆಯ ಕುರಿತು ತನಿಖೆ ಮುಂದುವರಿದಿದೆ.