ಬೆಂಗಳೂರು: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ ಚಾಪ್ಟರ್ 1’ ಅ. 2ರಂದು ತೆರೆಕಂಡಿತ್ತು. ಇದೀಗ ಸಿನಿಮಾ ಬಿಡುಗಡೆಯಾಗಿ ಒಂದು ವಾರ ಕಳೆದಿದ್ದು, ಮೊದಲ ವಾರದಲ್ಲೇ 509.25 ಕೋಟಿ ಗಳಿಕೆ ಮಾಡಿದೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹೊಂಬಾಳೆ ಫಿಲ್ಮ್ಸ್ ಮಾಹಿತಿ ಹಂಚಿಕೊಂಡಿದೆ. ಮೊದಲ ವಾರದ
ದಾಖಲೆಯ ಗಳಿಕೆ ಪೋಸ್ಟ್ ಹಂಚಿಕೊಂಡ ಹೊಂಬಾಳೆ ಫಿಲ್ಮ್ಸ್, ‘ಕಾಂತಾರ ಚಾಪ್ಟರ್ 1 ಮೊದಲ ವಾರದಲ್ಲಿ ವಿಶ್ವಾದ್ಯಂತ 509.25 ಕೋಟಿಯನ್ನು ದಾಟಿದೆ ಎಂದು ಬರೆದುಕೊಂಡಿದೆ.ಸುಮಾರು 5000ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಪ್ರದರ್ಶನಗೊಂಡಿರುವ ಕಾಂತಾರ ಚಾಪ್ಟರ್ 1 ಸಿನಿಮಾ ಸದ್ಯ ಕಾಂತಾರಾ ಚಾಪ್ಟರ್ 1 ಸಿನಿಮಾ ಬಿಡುಗಡೆಯಾಗಿ ಮೊದಲ ವಾರದಲ್ಲೇ 509.25 ಕೋಟಿ ಗಳಿಕೆ ಮಾಡಿದೆ. ಆ ಮೂಲಕ ಕಾಂತಾರ ಮೊದಲ ಚಿತ್ರದ ದಾಖಲೆಯನ್ನು ಮುರಿದಿದೆ. ರಾಜ್ಯದಲ್ಲಿ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿಯೂ ಕಾಂತಾರ ಚಾಪ್ಟರ್1 ಬಾಕ್ಸ್ ಆಫೀಸ್ನಲ್ಲಿ ಭರ್ಜರಿಯಾಗಿ ಮುನ್ನುಗ್ಗಿದೆ.















