ಬೆಂಗಳೂರು: ರಿಷಬ್ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಿ, ನಿರ್ದೇಶನ ಮಾಡಿದ್ದ ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ರಿಷಬ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾ ಮೂಲಕ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆ ದಿನಾಂಕವನ್ನು
ಅನೌನ್ಸ್ ಮಾಡಿದ್ದಾರೆ.2025ರ ಅಕ್ಟೋಬರ್ 2ರಂದು ‘ಕಾಂತಾರ: ಚಾಪ್ಟರ್ 1’ ರಿಲೀಸ್ ಆಗಲಿದೆ. ‘ಕಾಂತಾರ’ ಸಿನಿಮಾ ದೇಶಾದ್ಯಂತ ಸೂಪರ್ ಹಿಟ್ ಆಗಿತ್ತು. ಆ ಯಶಸ್ಸಿನಿಂದ ಪ್ರೀಕ್ವೆಲ್ ಘೋಷಿಸಲಾಗಿತ್ತು. ಅದಕ್ಕೆ ‘
‘ಹೊಂಬಾಳೆ ಫಿಲ್ಮ್ಸ್’ ಮೂಲಕ ನಿರ್ಮಾಪಕ ವಿಜಯ್ ಕಿರಗಂದೂರು ಅವರು ದೊಡ್ಡ ಮಟ್ಟದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಘಟಾನುಘಟಿ ತಂತ್ರಜ್ಞರು ಈ ಸಿನಿಮಾದ ತೆರೆಹಿಂದೆ ಕೆಲಸ ಮಾಡುತ್ತಿದ್ದಾರೆ. ರಿಷಬ್ ಶೆಟ್ಟಿ ಅವರು ಮುಖ್ಯ ಭೂಮಿಕೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.
ಬೃಹತ್ ಬಜೆಟ್ನಲ್ಲಿ ‘ಕಾಂತಾರ: ಚಾಪ್ಟರ್ 1’ ಸಿದ್ಧವಾಗುತ್ತಿದೆ. ಹಲವು ದಿನಗಳ ಕಾಲ ಶೂಟಿಂಗ್ ನಡೆಯಲಿದೆ. ಜೊತೆಗೆ ಪ್ರೀ-ಪ್ರೊಡಕ್ಷನ್ ಕೆಲಸಗಳಿಗೂ ಹೆಚ್ಚು ಸಮಯ ಹಿಡಿಯಲಿದೆ. ಈ ಎಲ್ಲ ಕಾರಣಗಳಿಂದ ಸಿನಿಮಾ ಬಿಡುಗಡೆಗೆ ಸಾಕಷ್ಟು ತಿಂಗಳು ಬೇಕಾಗುತ್ತದೆ. ಮುಂದಿನ ವರ್ಷ ಅಕ್ಟೋಬರ್ 2ರಂದು ‘ಕಾಂತಾರ: ಚಾಪ್ಟರ್ 1’ ಬಿಡುಗಡೆ ಮಾಡಲು ರಿಷಬ್ ಶೆಟ್ಟಿ ಹಾಗೂ ಚಿತ್ರತಂಡ ನಿರ್ಧರಿಸಿದೆ.‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ವಿಶ್ವಾದ್ಯಂತ ರಿಲೀಸ್ ಮಾಡಲಾಗುವುದು ಎಂದು ರಿಷಬ್ ಶೆಟ್ಟಿ ತಿಳಿಸಿದ್ದಾರೆ. ಹೆಚ್ಚಿನ ಅಪ್ಡೇಟ್ ತಿಳಿಯಲು ಅಭಿಮಾನಿಗಳು ಕಾದಿದ್ದಾರೆ.ಚಿತ್ರದ ಮೂರನೇ ಹಂತದ ಚಿತ್ರೀಕರಣ ನಡೆಯುತಿದೆ.