ಮುಕ್ಕೂರು: ಕಲಾತ್ಮಕ ಸಿನೆಮಾಗಳನ್ನು ವೀಕ್ಷಿಸುವುದರಿಂದ ಬೌದ್ಧಿಕ ವಿಕಸನಕ್ಕೆ ಕಾರಣವಾಗುತ್ತದೆ. ಮೇರು ಸಾಹಿತಿ ಡಾ.ಕೆ.ಶಿವರಾಮ ಕಾರಂತರ ಸಾಹಿತ್ಯ ಲೋಕವನ್ನು ತೆರೆದ ಕಣ್ಣಿನಿಂದ ನೋಡಿದಾಗ ಅದು ನಮ್ಮ ಬದುಕಿನ ಮೇಲೂ ಧನಾತ್ಮಕ ಪರಿಣಾಮ ಬೀರುತ್ತದೆ ಎಂದು ಸುಳ್ಯ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷೆ ಅಶ್ವಿನಿ ಕೋಡಿಬೈಲು ಹೇಳಿದರು.ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲದ ವತಿಯಿಂದ
ಮುಕ್ಕೂರು ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ಕಾರಂತಜ್ಜನಿಗೊಂದು ಪತ್ರ ಚಲನಚಿತ್ರ ಪ್ರದರ್ಶನದ ಸಭಾ ಕಾರ್ಯಕ್ರಮದಲ್ಲಿ ಅವರು ಆಶಯ ನುಡಿಗಳನ್ನಾಡಿದರು.
ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಕಾರ್ಯಕ್ರಮ ಉದ್ಘಾಟಿಸಿದರು.
ಮುಕ್ಕೂರು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಜಯಂತ ಗೌಡ ಕುಂಡಡ್ಕ ಮಾತನಾಡಿದರು. ನೇಸರ ಯುವಕ ಮಂಡಲದ ಅಧ್ಯಕ್ಷ ರಮೇಶ್ ಕಾನಾವು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶ್ರೀ ಉಳ್ಳಾಲ್ತಿ ಭಕ್ತವೃಂದದ ಸದಸ್ಯ ತೇಜಸ್ವಿತ್ ಎ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ದಯಾಕರ ಆಳ್ವ, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ, ಎಂಜಿನಿಯರ್ ನರಸಿಂಹ ತೇಜಸ್ವಿ, ಮುಕ್ಕೂರು ಶಾಲಾ ಹಿತಚಿಂತನ ಸಮಿತಿಯ ಹೊನ್ನಪ್ಪ ಗೌಡ ಚಾಮುಂಡಿಮೂಲೆ ಉಪಸ್ಥಿತರಿದ್ದರು. ಶಿಕ್ಷಕಿ ಕವಿತಾ ಪ್ರಾರ್ಥಿಸಿದರು. ಮುಖ್ಯಗುರು ಲತಾ ಸ್ವಾಗತಿಸಿದರು. ಶಿಕ್ಷಕಿ ಸೌಮ್ಯ ವಂದಿಸಿದರು.