ಸುಳ್ಯ:ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ವತಿಯಿಂದ ಆಯೋಜಿಸಲಾದ 2026–27ನೇ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವರ್ಷಿತ್ ಎಂ.ಎನ್. ಅವರು ಕರಾಟೆ ಸ್ಪರ್ಧೆಯಲ್ಲಿ
ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯ 82 ಕೆ.ಜಿ. ವಿಭಾಗದಲ್ಲಿ ಭಾಗವಹಿಸಿದ ವರ್ಷಿತ್ ಎಂ.ಎನ್. ಪ್ರಥಮ ಸ್ಥಾನ ಗಳಿಸಿದ್ದಾರೆ. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.ವರ್ಷಿತ್ ಈ ಹಿಂದೆ 2024ರಲ್ಲಿ ಮೈಸೂರಿನಲ್ಲಿ ನಡೆದ 27ನೇ ಶಿಟೋರಿಯು ಕರಾಟೆ ಡೊ ರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದಲ್ಲಿಯೂ ಸ್ಪರ್ಧೆ ಮಾಡಿದ್ದರು. 2026ರ 29ನೇ ಶಿಟೋರಿಯು ಕರಾಟೆ ಡೊ ರಾಷ್ಟ್ರೀಯ ಚಾಂಪಿಯನ್ಶಿಪ್ ನಲ್ಲಿಯೂ ಪ್ರಥಮ ಸ್ಥಾನ ಪಡೆದಿದ್ದಾರೆ.ಚಂದ್ರಶೇಖರ್ ಕನಕಮಜಲು, ವಿಜಯ್ ಧನುಷ್ ಮಾರ್ಗದರ್ಶನ ನೀಡಿದ್ದರು.







