ಗೂನಡ್ಕ: ಕರಾವಳಿ ಅಭಿವೃದ್ದಿ ಪ್ರಾಧಿಕಾರದ ನೂತನ ಅಧ್ಯಕ್ಷ ಎಂ.ಎ.ಗಫೂರ್ ಗೂನಡ್ಕದ ಬದ್ರಿಯಾ ಜುಮಾ ಮಸೀದಿಗೆ ಭೇಟಿ ನೀಡಿದರು. ಈ ಸಂದರ್ಭ ಗೂನಡ್ಕ ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಅಬ್ದುಲ್ ರೆಹ್ಮಾನ್ ಸಖಾಫಿ, ಉಪ್ಪಿನಂಗಡಿ ಹಾಗೂ
ಸುಳ್ಯ ಸಂಯುಕ್ತ ಜಮಾಅತ್ ಅಧ್ಯಕ್ಷರು ಹಾಗೂ ಗೂನಡ್ಕ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ಎಂ.ಎ.ಗಫೂರ್ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಗೂನಡ್ಕ ಬದ್ರಿಯಾ ಜುಮಾ ಮಸೀದಿಯ ಮಾಜಿ ಅಧ್ಯಕ್ಷರಾದ ಹಾಜಿ ಪಿ.ಎ.ಉಮ್ಮರ್ ಗೂನಡ್ಕ, ಕೋಶಾಧಿಕಾರಿ ಡಿ.ಆರ್.ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿ ಎ.ಟಿ.ಅಶ್ರಫ್ ದೊಡ್ಡಡ್ಕ ಉಪಸ್ಥಿತರಿದ್ದರು.















