ಸುಳ್ಯ: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸುಳ್ಯಕ್ಕೆ ಆಗಮಿಸಲು ಕ್ಷಣ ಗಣನೆ ಆರಂಭಗೊಂಡಿದೆ. ಸುಳ್ಯ ಚೆನ್ನಕೇಶ ದೇವಸ್ಥಾನದ ಬಳಿಯಲ್ಲಿ ಸಿದ್ಧಪಡಿಸಲಾದ ಬೃಹತ್ ವೇದಿಕೆಯಲ್ಲಿ ಸಾವಿರಾರು ಕಾರ್ಯಕರ್ತರು, ರಾಜ್ಯ ಹಾಗು ಜಿಲ್ಲಾ ಮಟ್ಟದ ನಾಯಕರು
ಆಗಮಿಸಿದ್ದಾರೆ. ಸುಳ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸುಳ್ಯಕ್ಕೆ ಎಐಸಿಸಿ ಅಧ್ಯಕ್ಷರು ಆಗಮಿಸುತ್ತಿದ್ದು. ಎಲ್ಲಾ ಸಿದ್ಧತೆಗಳನ್ನೂ ಮಾಡಿ ಕೊಳ್ಳಲಾಗಿದೆ. ಹೆಲಿಕಾಪ್ಟರ್ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳೂರಿನಿಂದ ಸುಳ್ಯಕ್ಕೆ ಆಗಮಿಸಲಿದ್ಸಾರೆ. ಮಹಾತ್ಮಾ ಗಾಂಧಿ ಮಲ್ನಾಡ್ ಪ್ರೌಢ ಶಾಲೆಯ ಗ್ರೌಂಡ್ನಲ್ಲಿ ಸಿದ್ಧಗೊಳಿಸಿರುವ ಹೆಲಿಪ್ಯಾಡ್ನಲ್ಲಿ ಇಳಿದು ಅವರು ಸಮಾವೇಶದ ವೇದಿಕೆಗೆ ಆಗಮಿಸಲಿದ್ದಾರೆ.