ಕಾರ್ಗಿಲ್:ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು.ದ್ರಾಸ್ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿದ ಪ್ರಧಾನಿ, ರಾಷ್ಟ್ರದ ಸೇವೆಗಾಗಿ

ಪ್ರಾಣ ತ್ಯಾಗ ಮಾಡಿದ ಸಶಸ್ತ್ರ ಪಡೆಗಳ ಅಧಿಕಾರಿಗಳು ಮತ್ತು ಸೈನಿಕರಿಗೆ ಗೌರವ ಸಲ್ಲಿಸಿದರು.
ಲಡಾಖ್ನ ಕಾರ್ಗಿಲ್ನಲ್ಲಿ ಸುಮಾರು ಮೂರು ತಿಂಗಳ ಕಾಲ ನಡೆದ ಯುದ್ಧವು 1999ರ ಜುಲೈ 26ರಂದು ಅಧಿಕೃತವಾಗಿ ಕೊನೆಗೊಂಡಿತು. ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತವು ವಿಜಯ ಸಾಧಿಸಿದ ಸ್ಮರಣಾರ್ಥ ಈ ದಿನವನ್ನು ‘ಕಾರ್ಗಿಲ್ ವಿಜಯ ದಿವಸ’ ಎಂದು ಆಚರಿಸಲಾಗುತ್ತದೆ.














