ಸುಳ್ಯ:ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಕೆ.ಪಿ.ಜಾನಿಯವರನ್ನು ಮೈಸೂರು ವಿಭಾಗೀಯ ವ್ಯಾಪ್ತಿಯಲ್ಲಿ ಬರುವ 5 ಜಿಲ್ಲೆಗಳ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ ಹಾಗೂ
ಉಡುಪಿ ಜಿಲ್ಲೆಗಳಿಗೆ ಕಾರ್ಮಿಕ ಕಲ್ಯಾಣ ಮಂಡಳಿಯ ಉಸ್ತುವಾರಿಗಳಾಗಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರ ಸೂಚನೆಯ ಮೇರೆಗೆ ನೇಮಕಗೊಳಿಸಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಆದೇಶ ಮಾಡಿದ್ದಾರೆ.
ಈ ಐದು ಜಿಲ್ಲೆಗಳಲ್ಲಿ ಮಂಡಳಿಯ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕೆ.ಪಿ.ಜಾನಿಯವರಿಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.