ಸುಳ್ಯ: ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ರಾಜ್ಯ ಸದಸ್ಯರನ್ನಾಗಿ ಸುಳ್ಯದ
ಕಾರ್ಮಿಕ ಮುಖಂಡ ಹಾಗೂ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿಯ ಸಂಯೋಜಕರಾದ ಕೆ.ಪಿ.ಜಾನಿ ಕಲ್ಲುಗುಂಡಿ ಅವರನ್ನು ಮರುನೇಮಕಗೊಳಿಸಿ ಆದೇಶಿಸಲಾಗಿದೆ. ಆಗಸ್ಟ್ 7 ರಂದು ಬೆಂಗಳೂರಿನ ಮಂಡಳಿಯ ಕಚೇರಿಯಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪ್ರಥಮ ಸಭೆಯಲ್ಲಿ ಅವರು ಭಾಗವಹಿಸಿದರು.