ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ ನೋಂದಾಯಿತ ಕಾರ್ಮಿಕ ಕುಟುಂಬಕ್ಕೆ ಉಚಿತ ಅರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯಿತು. ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್
ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ, ಸ್ವಾಗತಿಸಿದರು. ಉಪಾಧ್ಯಕ್ಷರಾದ ಎಸ್. ಕೆ. ಹನೀಫ್ ಕಾರ್ಯಕ್ರಮದ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಸುಂದರಿ ಮುಂಡಡ್ಕ. ಮಾಜಿ ಉಪಾಧ್ಯಕ್ಷರಾದ ಲಿಸ್ಸಿ ಮೊನಾಲಿಸಾ. ಸದಸ್ಯರಾದ ವಿಮಲಾ ಪ್ರಸಾದ್, ಕಾರ್ಮಿಕ ಇಲಾಖೆಯ ಕೋ ಒರ್ಡಿನೆಟರ್ ಪ್ರಸಾದ್ ಇಲಾಖೆಯ ಅಧಿಕಾರಿಗಳು, ಕಾರ್ಮಿಕ ಮುಖಂಡ ಪ್ರಸಾದ್. ಮೊದಲದವರು ಉಪಸ್ಥಿತರಿದ್ದರು. ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಅರೋಗ್ಯ ತಪಾಸಣಾ ಸದುಪಯೋಗ ಪಡಕೊಂಡರು