ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಿಡಬ್ಲ್ಯೂಆರ್ಸಿ ಆದೇಶವನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಆ.13ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ.ಇಂದು ವಿವಿಧ ಸಂಘಟನೆಗಳ ಜತೆ ಸಭೆ ನಡೆಸಿದ ಕನ್ನಡ ಪರ ಹೋರಾಟಗಾರರ ವಾಟಾಳ್ ನಾಗರಾಜ್, ಆ.13ರಂದು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಿದ್ದೇವೆ ಎಂದರು. ಇದಕ್ಕೆ
ಹಲವು ಸಂಘಟನೆಗಳಿಂದ ಬೆಂಬಲ ಸಿಕ್ಕಿದೆ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಹೇಳಿದರು.13ರ ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಕರ್ನಾಟಕ ಬಂದ್ ನಡೆಯಲಿದೆ. ನಮ್ಮ ಹೋರಾಟಕ್ಕೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ, ಲಾರಿ ಮಾಲೀಕರು ಮತ್ತು ಚಾಲಕರ ಸಂಘ, ಆಟೋ ಚಾಲಕರು ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘಗಳು ಬಂದ್ಗೆ ಸಂಪೂರ್ಣ ಬೆಂಬಲ ಘೋಷಿಸಿವೆ. ಮುಖ್ಯವಾಗಿ, ಬಂದ್ನ ಸಮಯದಲ್ಲಿ ತುರ್ತು ಸೇವೆಗಳಿಗೆ ತೊಂದರೆ ಮಾಡುವುದಿಲ್ಲ ಎಂದು ವಾಟಾಳ್ ನಾಗರಾಜ್ ಸ್ಪಷ್ಟಪಡಿಸಿದ್ದಾರೆ.









