ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಇಂದು ಬಜೆಟ್ ಮಂಡಿಸಿದ್ದಾರೆ. ಅವರು ದಾಖಲೆಯ 17ನೇ ಬಾರಿ ಬಜೆಟ್ ಮಂಡಿಸಿದ್ದಾರೆ.
ಕೃಷಿ ವಲಯದಲ್ಲಿ ರೈತರ ಆದಾಯ ವೃದ್ಧಿಗಾಗಿ 100 ಕೋಟಿ ವೆಚ್ಚದಲ್ಲಿ ಮುಂದಿನ 3 ವರ್ಷಗಳಲ್ಲಿ ‘ಮುಖ್ಯಮಂತ್ರಿ ಕೃಷಿ ವಿಸ್ತಾರ’ ಯೋಜನೆಯ
ಅನುಷ್ಠಾನ,ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಮುಂದಿನ 3 ವರ್ಷಗಳಲ್ಲಿ ‘ವಸುಧಾಮೃತ’ ಕಾರ್ಯಕ್ರಮ ಜಾರಿ,ಬೆಳೆಗಳಿಗೆ ಕೀಟ ಹಾಗೂ ರೋಗಗಳಿಂದ ರಕ್ಷಣೆಗಾಗಿ ‘ಸಸ್ಯ ಸಂಜೀವಿನಿ’ ಯೋಜನೆ ಜಾರಿ,ಎಐ ತಂತ್ರಜ್ಞಾನದೊಂದಿಗೆ ಕೃಷಿ ಇಲಾಖೆಯ ʼರೈತ ಕರೆ ಕೇಂದ್ರʼಗಳ ಉನ್ನತೀಕರಣ
ವಾಣಿಜ್ಯ ರಂಗದಲ್ಲಿ ಅದ್ವಿತೀಯ ಪಾತ್ರ, ಎ.ಐಯಲ್ಲಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆ ಎಂದ ಅವರು ರಾಜ್ಯದಲ್ಲಿ ಅತಿ ಹೆಚ್ಚು ತೆರಿಗೆ ಸಂಗ್ರಹ ಮಾಡುವ ಕರ್ನಾಟಕ ರಾಷ್ಟ್ರದಲ್ಲಿ ಮುಂಚೂಣಿಯಲ್ಲಿದೆ.
ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಭದ್ರತೆ ಸಾಧ್ಯವಾಗಿದೆ ಎಂದು ಹೇಳಿದ್ದಾರೆ.ಚಿತ್ರದುರ್ಗ ಜಿಲ್ಲೆಯ ಬಬ್ಬೂರಿನ ಜಿಲ್ಲಾ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ ʼಕೃಷಿ ಉದ್ದಿಮೆ ತರಬೇತಿ ಕೇಂದ್ರʼವಾಗಿ ಉನ್ನತೀಕರಣ
ಸಣ್ಣ, ಅತೀ ಸಣ್ಣ ರೈತರಿಗೆ ಸ್ಥಳೀಯವಾಗಿ ಅಗತ್ಯವಿರುವ ಎತ್ತು ಚಾಲಿತ ಹಾಗೂ ಕೈಚಾಲಿತ ಉಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆಯಡಿ ಒದಗಿಸಲಾಗುವುದು. ಬಿತ್ತನೆ ಬೀಜ, ಕೀಟನಾಶಕ, ರಸಗೊಬ್ಬರ ಹಾಗೂ ಕೃಷಿ ಯಂತ್ರೋಪಕರಣಗಳು ಒಂದೇ ಸೂರಿನಡಿ ದೊರಕಿಸಲು ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲೂ ಎಂಎಸ್ಐಎಲ್ ವತಿಯಿಂದ ‘ರೈತ ಮಾಲ್’ಗಳ ಸ್ಥಾಪನೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.








