ಮಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ಖಂಡಿಸಿ ಸೆ. 29ರಂದು ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ
ರಾಜಕೀಯ ಪಕ್ಷಗಳು ಕರ್ನಾಟಕ ಬಂದ್ಗೆ ಕರೆ ನೀಡಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲಾ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾಹಿತಿ ನೀಡಿದ್ದಾರೆ. ಕನ್ನಡ ಪರ ಮತ್ತು ರೈತ
ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಬಂದ್ ಕರೆಗೆ ದ.ಕ.ಜಿಲ್ಲೆಯಲ್ಲಿ ಯಾವುದೇ ಬೆಂಬಲ ಘೋಷಣೆಯ ಮಾಡಿಲ್ಲ. ಎಂದಿನಂತೆ ಸಹಜ ಪ್ರಕ್ರಿಯೆ ಮುಂದುವರಿಯುವ ಸಾಧ್ಯತೆ ಇದೆ. ಶಾಲಾ ಕಾಲೇಜುಗಳು ತೆರೆದು ಕಾರ್ಯಾಚರಿಸಲಿದೆ ಎಂದು ಜಿಲ್ಲಾಡಳಿತ ಹೇಳಿದೆ.