ನವದೆಹಲಿ: ಕರ್ನಾಟಕ ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಎಪ್ರಿಲ್ 9ರಂದು ಉಪ ಚುನಾವಣೆ ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಘೋಷಿಸಿದರು. ನವದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್,ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಎಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4 ರಂದು ಚುನಾವಣಾ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.












